Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:5 - ಕನ್ನಡ ಸತ್ಯವೇದವು J.V. (BSI)

5 ಸಂಸೋನನು ತನ್ನ ತಂದೆತಾಯಿಗಳ ಸಹಿತವಾಗಿ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷೇತೋಟಗಳ ಬಳಿಗೆ ಬಂದಾಗ ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಂಸೋನನು ತನ್ನ ತಂದೆತಾಯಿಗಳ ಸಮೇತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿತೋಟಗಳ ಬಳಿಗೆ ಬಂದನು. ಅಲ್ಲಿ ಒಂದು ಪ್ರಾಯದ ಸಿಂಹ ಗರ್ಜಿಸುತ್ತಾ ಅವನೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:5
10 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‍ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ನಾನು ಒಡನೆ ಅದನ್ನು ಬೆನ್ನಟ್ಟಿ ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬಿದ್ದರೆ ಅದನ್ನು ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲಿನವನಾದ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.


ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು