Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:12 - ಕನ್ನಡ ಸತ್ಯವೇದವು J.V. (BSI)

12 ಅವರು - ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ ಅನ್ನಲು ಸಂಸೋನನು - ಹಾಗಾದರೆ ನೀವು ನನ್ನನ್ನು ಕೊಲ್ಲುವದಿಲ್ಲವೆಂದು ಆಣೆಮಾಡಿರಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ,” ಎನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:12
7 ತಿಳಿವುಗಳ ಹೋಲಿಕೆ  

ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.


ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.


ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು.


ಅದಕ್ಕೆ ಅವರು - ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು