Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:5 - ಕನ್ನಡ ಸತ್ಯವೇದವು J.V. (BSI)

5 ಪಂಜುಗಳಿಗೆ ಬೆಂಕಿಹೊತ್ತಿಸಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಲ್ಲಿ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ನರಿಗಳನ್ನು ‘ಫಿಲಿಷ್ಟಿಯರ ಬೆಳೆ ತುಂಬಿದ ಹೊಲಗಳಿಗೆ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಸುಟ್ಟುಬಿಟ್ಟನು. ಎಣ್ಣೆಯ ಮರಗಳ ತೋಟಗಳು ಸಹ ಸುಟ್ಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಂಸೋನನು ಆ ಪಂಜುಗಳಿಗೆ ಬೆಂಕಿ ಹಚ್ಚಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ಈ ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದುಹಾಕಿದ ತೆನೆಗೂಡುಗಳನ್ನೂ ಸುಟ್ಟುಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಾಲಗಳಿಗೆ ಬೆಂಕಿ ಹಚ್ಚಿ, ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು, ತೆನೆ ಗೂಡುಗಳನ್ನೂ, ಪೈರುಗಳನ್ನೂ, ದ್ರಾಕ್ಷಿತೋಟಗಳನ್ನೂ, ಹಿಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:5
5 ತಿಳಿವುಗಳ ಹೋಲಿಕೆ  

ಆದದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ - ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಹೊಲವುಂಟಲ್ಲಾ; ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ ಎಂದು ಆಜ್ಞಾಪಿಸಿದನು; ಅವರು ಹಾಗೆಯೇ ಮಾಡಿದರು.


ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಹತ್ತಿದ್ದರಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ ಬೆಳೆಯಾಗಲಿ ಹೊಲವಾಗಲಿ ಸುಟ್ಟುಹೋದರೆ, ಬೆಂಕಿಹೊತ್ತಿಸಿದವನು ಈಡುಕೊಡಬೇಕು.


ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವದನ್ನು ತಿನ್ನಲಿ; ವಿುಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷೇತೋಟಗಳ ವಿಷಯದಲ್ಲಿಯೂ ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಅದೇ ರೀತಿಯಲ್ಲಿ ಮಾಡಬೇಕು.


ಮುನ್ನೂರು ನರಿಗಳನ್ನು ಹಿಡಿದು ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ


ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು