Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:6 - ಕನ್ನಡ ಸತ್ಯವೇದವು J.V. (BSI)

6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:6
6 ತಿಳಿವುಗಳ ಹೋಲಿಕೆ  

ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು.


ಪಂಜುಗಳಿಗೆ ಬೆಂಕಿಹೊತ್ತಿಸಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಲ್ಲಿ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.


ಸಂಸೋನನು ಅವರಿಗೆ - ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವದಿಲ್ಲ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು