Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:8 - ಕನ್ನಡ ಸತ್ಯವೇದವು J.V. (BSI)

8 ಅವರ ತೊಡೆ ಸೊಂಟಗಳನ್ನು ಮುರಿದು ಅವರನ್ನು ಸಂಹರಿಸಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ತೊಡೆ ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿಬಿಟ್ಟನು. ಅನಂತರ ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:8
9 ತಿಳಿವುಗಳ ಹೋಲಿಕೆ  

ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ಸಂಸೋನನು ಅವರಿಗೆ - ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವದಿಲ್ಲ ಎಂದು ಹೇಳಿ


ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.


ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು.


ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು - ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು ಎಂದು ಉತ್ತರಕೊಟ್ಟರು.


ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು