Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಸೂಳೆಯನ್ನು ಕಂಡು ಅವಳ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಸಂಸೋನನು ಗಾಜಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಆ ರಾತ್ರಿ ಅವಳೊಂದಿಗಿರಲು ಅವಳ ಮನೆಯೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಂಸೋನನು ಗಾಜಕ್ಕೆ ಹೋಗಿ, ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು, ಅವಳ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:1
8 ತಿಳಿವುಗಳ ಹೋಲಿಕೆ  

ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.


ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ


ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು