Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:14 - ಕನ್ನಡ ಸತ್ಯವೇದವು J.V. (BSI)

14 ಅವಳು ಅವನ ತಲೇಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವಳು ಅವನ ತಲೆಗೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಂಸೋನನು ಮಲಗಿರುವಾಗ ದೆಲೀಲಳು ಅವನ ತಲೆಗೂದಲಿನ ಏಳು ಜಡೆಗಳನ್ನು ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು, ಮಗ್ಗದ ಗೂಟವನ್ನೂ ಮಗ್ಗವನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:14
4 ತಿಳಿವುಗಳ ಹೋಲಿಕೆ  

ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.


ಆಗ ದೆಲೀಲಳು ಸಂಸೋನನಿಗೆ - ನೀನು ತಿರಿಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂದು ತಿಳಿಸು ಅನ್ನಲು ಅವನು - ನನ್ನ ತಲೇಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು ಎಂದು ಹೇಳಿದನು.


ಆಕೆಯು ತಿರಿಗಿ ಅವನಿಗೆ - ನಿನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳಬಹುದು? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರುಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾಶಕ್ತಿ ಯಾವದರಿಂದ ಬಂದಿತೆಂಬದನ್ನು ನನಗೆ ತಿಳಿಸಲಿಲ್ಲ ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು