Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:23 - ಕನ್ನಡ ಸತ್ಯವೇದವು J.V. (BSI)

23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:23
12 ತಿಳಿವುಗಳ ಹೋಲಿಕೆ  

ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ!


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.


ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ ದೆವ್ವಗಳಿಗೆ ಅರ್ಪಿಸುತ್ತಾರೆಂದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಭಾಗಿಗಳಾಗಿರಬೇಕೆಂಬದು ನನ್ನ ಇಷ್ಟವಲ್ಲ.


ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯ ಹತ್ತಿದವು.


ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡು ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು