Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:28 - ಕನ್ನಡ ಸತ್ಯವೇದವು J.V. (BSI)

28 ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:28
19 ತಿಳಿವುಗಳ ಹೋಲಿಕೆ  

[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಆಗ ಯೆಹೋವನ ಹೆಸರು ಹೇಳಿ - ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು ಎಂದು ಪ್ರಾರ್ಥಿಸಿದೆನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.


ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿಯುತ್ತಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.


ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು


ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವದಕ್ಕೆ ಕೈಚಾಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು