Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:6 - ಕನ್ನಡ ಸತ್ಯವೇದವು J.V. (BSI)

6 ದೆಲೀಲಳು ಸಂಸೋನನಿಗೆ - ನಿನಗೆ ಇಂಥ ಮಹಾಶಕ್ತಿ ಹೇಗೆ ಬಂದಿತು? ನಿನ್ನನ್ನು ಕಟ್ಟಿ ಕುಂದಿಸುವದು ಹೇಗೆ ಎಂಬದನ್ನು ದಯವಿಟ್ಟು ನನಗೆ ತಿಳಿಸು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:6
12 ತಿಳಿವುಗಳ ಹೋಲಿಕೆ  

ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು; ಕಪಟದ ಬಾಯಿ ನಾಶಕರ.


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.


ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು.


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು