Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:7 - ಕನ್ನಡ ಸತ್ಯವೇದವು J.V. (BSI)

7 ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:7
12 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ಮೋಸಹೋಗಬೇಡಿರಿ; ದೇವರು ತಿರಸ್ಕಾರ ಸಹಿಸುವವನಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ; ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.


ಸೌಲನು ಮೀಕಲಳಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ ಎನ್ನಲು ಆಕೆಯು ಅವನಿಗೆ - ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆಂದು ಅವನು ನನಗೆ ಹೇಳಿದನು ಅಂದಳು.


ದೆಲೀಲಳು ತಿರಿಗಿ ಸಂಸೋನನಿಗೆ - ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂಬದನ್ನು ದಯವಿಟ್ಟು ನನಗೆ ತಿಳಿಸು ಎಂದಳು.


ದೆಲೀಲಳು ಸಂಸೋನನಿಗೆ - ನಿನಗೆ ಇಂಥ ಮಹಾಶಕ್ತಿ ಹೇಗೆ ಬಂದಿತು? ನಿನ್ನನ್ನು ಕಟ್ಟಿ ಕುಂದಿಸುವದು ಹೇಗೆ ಎಂಬದನ್ನು ದಯವಿಟ್ಟು ನನಗೆ ತಿಳಿಸು ಅನ್ನಲು


ಫಿಲಿಷ್ಟಿಯ ಪ್ರಭುಗಳು ಅಂಥ ಏಳು ಹಸೀ ತಂತಿಗಳನ್ನು ಅವಳಿಗೆ ತಂದುಕೊಟ್ಟರು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು