Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:2 - ಕನ್ನಡ ಸತ್ಯವೇದವು J.V. (BSI)

2 ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:2
21 ತಿಳಿವುಗಳ ಹೋಲಿಕೆ  

ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ಅವನಿಗೆ ಶುಭವಾಗಲಿ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು.


ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.


ಕೂಡಲೆ ಒಬ್ಬನು ಅವನಿಗೆ - ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ ಎಂದು ತಿಳಿಸಿದನು.


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಲೇವಿಯರು - ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬೊಬ್ಬ ಮನುಷ್ಯನಿದ್ದನು.


ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು - ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆ ಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು