Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:4 - ಕನ್ನಡ ಸತ್ಯವೇದವು J.V. (BSI)

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:4
9 ತಿಳಿವುಗಳ ಹೋಲಿಕೆ  

ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು - ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆ ಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು ಎಂದು ಹೇಳಿ


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.


ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು