Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:6 - ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:6
13 ತಿಳಿವುಗಳ ಹೋಲಿಕೆ  

ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;


ಮೂರ್ಖನ ನಡತೆ ಅವನ ಗಣನೆಗೆ ಸರಿ; ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ದಾನ್‍ಕುಲದವರಿಗೆ ಆವರೆಗೂ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವು ಸಿಕ್ಕದ್ದರಿಂದ ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲ್ಯರ ಒಂದು ಕುಲವು ಹಾಳಾಗಿ ಹೋಯಿತಲ್ಲಾ ಎಂದು ಕೂಗಿದರು.


ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.


ಇಸ್ರಾಯೇಲ್ಯರ ಅರಸರು ಆಳುವದಕ್ಕಿಂತ ಮುಂಚೆ ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು