ನ್ಯಾಯಸ್ಥಾಪಕರು 18:10 - ಕನ್ನಡ ಸತ್ಯವೇದವು J.V. (BSI)10 ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶ ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.