Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:24 - ಕನ್ನಡ ಸತ್ಯವೇದವು J.V. (BSI)

24 ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:24
15 ತಿಳಿವುಗಳ ಹೋಲಿಕೆ  

ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಒಬ್ಬ ಲೇವಿಯು ತನ್ನ ಮನೆಯಲ್ಲಿ ಯಾಜಕನಾಗಿರುವದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು ಅಂದುಕೊಂಡನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ - ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ ಎಂದು ಕೇಳಲು


ದಾನ್ಯರು ಅವನಿಗೆ - ನಮ್ಮಲ್ಲಿ ಕೆಲವರು ಸಿಟ್ಟಿನವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಟ್ಟೀರಿ; ಆದದರಿಂದ ಬಾಯಿಮುಚ್ಚಿಕೊಂಡು ಹೋಗು ಎಂದು ಹೇಳಿ ಮುಂದೆ ನಡೆದರು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು