Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:3 - ಕನ್ನಡ ಸತ್ಯವೇದವು J.V. (BSI)

3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವದನ್ನು ಕೇಳಿ ಗುರುತುಹಿಡಿದು ಅವನ ಬಳಿಗೆ ಹೋಗಿ - ನಿನ್ನನ್ನು ಇಲ್ಲಿಗೆ ಕರತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ ಎಂದು ಅವನನ್ನು ಕೇಳಲು ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದ್ದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:3
6 ತಿಳಿವುಗಳ ಹೋಲಿಕೆ  

ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -


ಇಲ್ಲಿ ನಿನಗೇನು? ಇಲ್ಲಿ ನಿನಗೆ ಯಾರಿದ್ದಾರೆ? ಇಲ್ಲಿ ನಿನಗಾಗಿ ಗೋರಿಯನ್ನು ತೋಡಿಸಿಕೊಂಡಿದ್ದೀಯಾ? ಎತ್ತರದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ ಬಂಡೆಯನ್ನು ಕಡೆಯಿಸಿ ನಿನಗೆ ನಿವಾಸವನ್ನು ಮಾಡಿಸುತ್ತಾ ಇದ್ದೀಯೋ?


ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.


ಯಾಕೋಬನು ತನ್ನ ತಂದೆಯ ಹತ್ತರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ - ಸ್ವರವೇನೋ ಯಾಕೋಬನ ಸ್ವರ, ಕೈ ಏಸಾವನ ಕೈ ಅಂದುಕೊಂಡನು.


ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.


ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು