Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:31 - ಕನ್ನಡ ಸತ್ಯವೇದವು J.V. (BSI)

31 ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರ ಮನೆ ಶೀಲೋವಿನಲ್ಲಿ ಇರುವ ಮಟ್ಟಿಗೂ, ಅವರು ಮೀಕನು ಮಾಡಿದ ವಿಗ್ರಹವನ್ನು ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:31
8 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಅವನು ಇವನಿಗೆ - ನಾವು ಯೆಹೂದದ ಬೇತ್ಲೆಹೇವಿುನಿಂದ ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೇತ್ಲೆಹೇವಿುಗೆ ಹೋಗಿದ್ದೆನು; ಈಗ ತಿರಿಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರಕೊಂಡು ಹೋಗಲಿಲ್ಲ.


ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲ್ಯರ ಅಧರ್ಮದ ನಿವಿುತ್ತ ನಾನು ಅದಕ್ಕೆ ತಂದ ಗತಿಯನ್ನು ನೋಡಿರಿ.


ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿ ಹೋಗಿರಿ.


ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು