Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:5 - ಕನ್ನಡ ಸತ್ಯವೇದವು J.V. (BSI)

5 ಆಗ ಅವರು ಅವನಿಗೆ - ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವದೋ ಇಲ್ಲವೋ ಎಂಬದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು, “ದಯವಿಟ್ಟು ನಮ್ಮ ಪ್ರಯಾಣ ಸಫಲ ಆಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:5
12 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.


ಚಿಕ್ಕವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರೂ - ಇವನು ಮಹಾ ಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ?


ಒಬ್ಬ ಲೇವಿಯು ತನ್ನ ಮನೆಯಲ್ಲಿ ಯಾಜಕನಾಗಿರುವದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು ಅಂದುಕೊಂಡನು.


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.


ಅವನು - ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು ಅಂದನು.


(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು