Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:9 - ಕನ್ನಡ ಸತ್ಯವೇದವು J.V. (BSI)

9 ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಐದು ಜನ, “ನಾವು ಒಂದು ಪ್ರದೇಶವನ್ನು ಹುಡುಕಿದ್ದೇವೆ. ಅದು ಬಹಳ ಚೆನ್ನಾಗಿದೆ. ತಡಮಾಡುವುದು ಬೇಡ. ಬೇಗ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:9
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.


ಅಗ ಯೆಹೋಶುವನು ಇಸ್ರಾಯೇಲ್ಯರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.


ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರ್ರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ.


ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು - ನೀವು ಯಾವ ವರ್ತಮಾನ ತಂದಿದ್ದೀರಿ ಎಂದು ಅವರನ್ನು ಕೇಳಲು


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು