ನ್ಯಾಯಸ್ಥಾಪಕರು 19:15 - ಕನ್ನಡ ಸತ್ಯವೇದವು J.V. (BSI)15 ಆದದರಿಂದ ಅವರು ಇಳುಕೊಳ್ಳುವದಕ್ಕೋಸ್ಕರ ಗಿಬೆಯಕ್ಕೆ ಹೋಗಿ ಯಾರೂ ಮನೆಯಲ್ಲಿ ಸೇರಿಸಿಕೊಳ್ಳದ್ದರಿಂದ ಸಂತೇ ಬೀದಿಯಲ್ಲಿ ಕೂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಅವರು ಗಿಬೆಯದಲ್ಲಿ ರಾತ್ರಿ ಕಳೆಯಲು ಉಳಿದರು. ಅವರು ಹೋಗಿ ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಮನೆಯಲ್ಲಿ ಇಳಿದುಕೊಳ್ಳುವುದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |