Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:20 - ಕನ್ನಡ ಸತ್ಯವೇದವು J.V. (BSI)

20 ಆಗ ಆ ಮುದುಕನು - ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಆ ಮುದುಕ, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಆ ವೃದ್ಧನು, “ನೀನು ನನ್ನ ಮನೆಗೆ ಬಂದು ಈ ರಾತ್ರಿ ಇಳಿದುಕೋ. ನಿನಗೆ ಬೇಕಾದುದನ್ನು ನಾನು ಕೊಡುವೆ. ನೀನು ಬೀದಿಯಲ್ಲಿ ಮಾತ್ರ ಇರಬೇಡ” ಎಂದು ಹೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಆ ಮುದುಕನು, “ನಿನಗೆ ಶುಭವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ, ಹೇಗಾದರೂ ಬೀದಿಯೊಳಗೆ ಇಳಿದುಕೊಳ್ಳಬೇಡ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:20
15 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಅವನಿಗೆ - ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವದಿಲ್ಲ ಅಂದನು.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ಅವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು