Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:22 - ಕನ್ನಡ ಸತ್ಯವೇದವು J.V. (BSI)

22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:22
19 ತಿಳಿವುಗಳ ಹೋಲಿಕೆ  

ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಆ ಊರಿನ ಜನರು ಅದೇ ರಾತ್ರಿ ನಾನು ಇಳುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯನ್ನು ಬಹಳವಾಗಿ ಭಂಗಪಡಿಸಿದರು. ಆಕೆಯು ಸತ್ತಳು.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?


ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಅವರು ಇಸ್ರಾಯೇಲ್ಯರಲ್ಲಿ ನಡಿಸಿದ ಇಂಥ ಕೆಟ್ಟ ಹುಚ್ಚುಗೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು