Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ ರಾತ್ರಿಯಲ್ಲೆಲ್ಲಾ ಬಹುಕ್ರೂರತನದಿಂದ ನಡಿಸಿ ಕೋಳಿಕೂಗುವ ಹೊತ್ತಾಗಲು ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದ್ದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು. ಅವರು ಅವಳನ್ನು ತೆಗೆದುಕೊಂಡು ಉದಯಕಾಲದ ಪರ್ಯಂತರ ರಾತ್ರಿಯೆಲ್ಲಾ ಕೆಡಿಸಿ, ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:25
9 ತಿಳಿವುಗಳ ಹೋಲಿಕೆ  

ಅವರು ತಮ್ಮ ದುಃಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಆ ಪುರುಷನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು - ಯೆಹೋವನ ಅನುಗ್ರಹದಿಂದ ಗಂಡುಮಗುವನ್ನು ಪಡೆದಿದ್ದೇನೆ ಎಂದು ಹೇಳಿದಳು.


ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು.


ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.


ಆ ಊರಿನ ಜನರು ಅದೇ ರಾತ್ರಿ ನಾನು ಇಳುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯನ್ನು ಬಹಳವಾಗಿ ಭಂಗಪಡಿಸಿದರು. ಆಕೆಯು ಸತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು