Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:3 - ಕನ್ನಡ ಸತ್ಯವೇದವು J.V. (BSI)

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ತಿರಿಗಿ ಮನೆಗೆ ಕರತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತೌರ ಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವಳ ಗಂಡನು ಎದ್ದು, ಅವಳ ಸಂಗಡ ಪ್ರೀತಿಯಿಂದ ಮಾತನಾಡಿ, ಅವಳನ್ನು ತಿರುಗಿ ಕರೆತರುವುದಕ್ಕೆ ತನ್ನ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರೆದುಕೊಂಡು ಹೋದಳು. ಆಕೆಯ ತಂದೆ ಅವನನ್ನು ಕಂಡಾಗ, ಸಂತೋಷದಿಂದ ಅವನನ್ನು ಸ್ವಾಗತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:3
16 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]


ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ - ನನ್ನನ್ನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗಗೊಡಿಸು ಅನ್ನಲು ಅವನು - ಹೋಗಬಾರದು;


ಅವನು ಹೋದದರಿಂದ ದೇವರಿಗೆ ಕೋಪವುಂಟಾಯಿತು; ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಇಬ್ಬರು ಆಳುಗಳು ಅವನ ಸಂಗಡ ಇದ್ದರು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.


ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.


ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು