ನ್ಯಾಯಸ್ಥಾಪಕರು 19:5 - ಕನ್ನಡ ಸತ್ಯವೇದವು J.V. (BSI)5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು. ಅಧ್ಯಾಯವನ್ನು ನೋಡಿ |