ನ್ಯಾಯಸ್ಥಾಪಕರು 19:6 - ಕನ್ನಡ ಸತ್ಯವೇದವು J.V. (BSI)6 ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |