Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:9 - ಕನ್ನಡ ಸತ್ಯವೇದವು J.V. (BSI)

9 ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:9
8 ತಿಳಿವುಗಳ ಹೋಲಿಕೆ  

ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು;


ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು - ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ಬಲಹೊಂದು ಎಂದು ಅವನನ್ನು ಬೇಡಿಕೊಳ್ಳಲು ತಿರಿಗಿ ಊಟಕ್ಕೆ ನಿಂತನು.


ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು