ನ್ಯಾಯಸ್ಥಾಪಕರು 2:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ಅಧ್ಯಾಯವನ್ನು ನೋಡಿ |