ನ್ಯಾಯಸ್ಥಾಪಕರು 2:12 - ಕನ್ನಡ ಸತ್ಯವೇದವು J.V. (BSI)12 ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.