ನ್ಯಾಯಸ್ಥಾಪಕರು 2:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು. ಅಧ್ಯಾಯವನ್ನು ನೋಡಿ |