Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:15 - ಕನ್ನಡ ಸತ್ಯವೇದವು J.V. (BSI)

15 ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು; ಅವರಿಗೆ ಬಹುಸಂಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:15
19 ತಿಳಿವುಗಳ ಹೋಲಿಕೆ  

ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು.


ಅವರು ದೊಡ್ಡವರಾಗುವ ತನಕ ಕಾದಿರುವಿರೋ? ಅಲ್ಲಿಯವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನಗೆ ವಿರೋಧವಾಗಿರುವದರಿಂದ ನಿಮಗೋಸ್ಕರ ಬಹಳ ದುಃಖಪಡುತ್ತೇನೆ ಅಂದಳು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು