ನ್ಯಾಯಸ್ಥಾಪಕರು 2:20 - ಕನ್ನಡ ಸತ್ಯವೇದವು J.V. (BSI)20 ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ, ಅಧ್ಯಾಯವನ್ನು ನೋಡಿ |