ನ್ಯಾಯಸ್ಥಾಪಕರು 2:3 - ಕನ್ನಡ ಸತ್ಯವೇದವು J.V. (BSI)3 ನೀವು ಹೀಗೆ ಮಾಡುವದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸಿ ಬಿಡುವದಿಲ್ಲ; ಅವರು ನಿಮ್ಮನ್ನು ಉಪದ್ರವಪಡಿಸುವರು; ಅವರ ದೇವತೆಗಳು ನಿಮಗೆ ಉರುಲಾಗುವವು ಎಂದು ಮೊದಲೇ ಹೇಳಿದೆನಲ್ಲಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.” ಅಧ್ಯಾಯವನ್ನು ನೋಡಿ |