Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:4
13 ತಿಳಿವುಗಳ ಹೋಲಿಕೆ  

ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ.


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ನೀವು ಹೀಗೆ ಮಾಡುವದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸಿ ಬಿಡುವದಿಲ್ಲ; ಅವರು ನಿಮ್ಮನ್ನು ಉಪದ್ರವಪಡಿಸುವರು; ಅವರ ದೇವತೆಗಳು ನಿಮಗೆ ಉರುಲಾಗುವವು ಎಂದು ಮೊದಲೇ ಹೇಳಿದೆನಲ್ಲಾ ಅಂದನು.


ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು