Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:5 - ಕನ್ನಡ ಸತ್ಯವೇದವು J.V. (BSI)

5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದಲೇ ಆ ಸ್ಥಳಕ್ಕೆ ‘ಬೋಕೀಮ್’ ಎಂದು ಹೆಸರಿಟ್ಟು ಅಲ್ಲಿಯೇ ಸರ್ವೇಶ್ವರನಿಗೆ ಬಲಿಯನ್ನರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಇಸ್ರೇಲರು ತಾವು ಗೋಳಾಡಿದ ಸ್ಥಳಕ್ಕೆ ಬೋಕೀಮ್ ಎಂದು ಕರೆದರು. ಬೋಕೀಮಿನಲ್ಲಿ ಇಸ್ರೇಲರು ಯೆಹೋವನಿಗೋಸ್ಕರ ಯಜ್ಞ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:5
8 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.


ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು