Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:13 - ಕನ್ನಡ ಸತ್ಯವೇದವು J.V. (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:13
30 ತಿಳಿವುಗಳ ಹೋಲಿಕೆ  

ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ; ಅವುಗಳನ್ನು ಹಿಡಿಯಬೇಕೆಂದಿರುವವನು ಕೈಯಿಂದ ಹಿಡಿಯಲಾರದೆ


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮುರ್ಖರೂ ಆದ ಕೆಲವು ಮಂದಿ - ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವದಿಲ್ಲ. ತಮ್ಮತಮ್ಮ ಹೆಂಡರುಮಕ್ಕಳನ್ನು ಕರಕೊಂಡು ಹೋಗಿಬಿಡಲಿ ಅಂದರು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?


ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?


ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು