Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:17 - ಕನ್ನಡ ಸತ್ಯವೇದವು J.V. (BSI)

17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲ್ಯರಲ್ಲಿ ನಾಲ್ಕು ಲಕ್ಷ ಭಟರಿದ್ದರು; ಇವರೆಲ್ಲರೂ ವೀರರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬೆನ್ಯಾಮೀನನವರ ಹೊರತು ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:17
10 ತಿಳಿವುಗಳ ಹೋಲಿಕೆ  

ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ಸೌಲನು ತೆಲಾಯೀವಿುನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಮಂದಿ ಇದ್ದರು.


ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲ್ಯರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.


ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 601,730.


ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು;


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.


ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು