Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:2 - ಕನ್ನಡ ಸತ್ಯವೇದವು J.V. (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:2
9 ತಿಳಿವುಗಳ ಹೋಲಿಕೆ  

ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಬೆನ್ಯಾಮೀನ್ಯರಲ್ಲದ ಇಸ್ರಾಯೇಲ್ಯರಲ್ಲಿ ನಾಲ್ಕು ಲಕ್ಷ ಭಟರಿದ್ದರು; ಇವರೆಲ್ಲರೂ ವೀರರೇ.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.


ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು.


ಯೋವಾಬನು ಅರಸನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ; ಯೆಹೂದ್ಯರಲ್ಲಿ ಐದು ಲಕ್ಷ.


(ಇಸ್ರಾಯೇಲ್ಯರು ಕೂಡಿಕೊಂಡು ವಿುಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಾಯೇಲ್ಯರು - ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ ಎಂದು ಕೇಳಲು


ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲ್ಯರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ಅವರೆಲ್ಲರೂ ಶೀಲೋವಿನಲ್ಲಿ ಕೂಡಿ ಬಂದು ಅವರೊಡನೆ ಯುದ್ಧಕ್ಕೆ ಹೊರಡಲು ಸಿದ್ಧರಾದರು.


ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು