Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:28 - ಕನ್ನಡ ಸತ್ಯವೇದವು J.V. (BSI)

28 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:28
21 ತಿಳಿವುಗಳ ಹೋಲಿಕೆ  

ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವದಕ್ಕೆ ತಾನೇ ನೇವಿುಸಿಕೊಂಡನಲ್ಲಾ.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.


ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.


ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.


ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ಅಷ್ಟರಲ್ಲಿ ಎಫ್ರಾಯೀಮ್ ಪರ್ವತ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನೂ ಆಗಿದ್ದ ಒಬ್ಬಾನೊಬ್ಬ ಮುದುಕನು ಸಾಯಂಕಾಲವಾದದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು