ನ್ಯಾಯಸ್ಥಾಪಕರು 20:36 - ಕನ್ನಡ ಸತ್ಯವೇದವು J.V. (BSI)36 ತಾವು ಸೋತು ಹೋದೆವೆಂಬದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. (ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚಿನೋಡುವದಕ್ಕೋಸ್ಕರ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚು ಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದರಿಂದ, ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. (ಇಸ್ರಯೇಲರಿಗೆ ತಾವು ಗಿಬೆಯದ ಸಮೀಪದಲ್ಲಿ ಹೊಂಚುಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸೆಯಿತ್ತು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ಧಾಳಿಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ತಾವು ಸೋತುಹೋದೆವೆಂಬುದು ಹೀಗೆ ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಏಕೆಂದರೆ ಇಸ್ರಾಯೇಲರು ಗಿಬೆಯದ ಹತ್ತಿರ ಹೊಂಚು ಹಾಕುವದಕ್ಕೆ ಇಟ್ಟ ಜನರನ್ನು ನಂಬಿದ್ದರು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು. ಅಧ್ಯಾಯವನ್ನು ನೋಡಿ |