Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:41 - ಕನ್ನಡ ಸತ್ಯವೇದವು J.V. (BSI)

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:41
14 ತಿಳಿವುಗಳ ಹೋಲಿಕೆ  

ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯ ಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು