Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:42 - ಕನ್ನಡ ಸತ್ಯವೇದವು J.V. (BSI)

42 ಅವರು ಇಸ್ರಾಯೇಲ್ಯರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧಸ್ಥರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವರು ಇಸ್ರಯೇಲರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಸೈನಿಕರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಇಸ್ರಾಯೇಲರ ಮುಂದೆ ಮರುಭೂಮಿಯ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಸೈನಿಕರು ಅವರನ್ನು ಹಿಡಿದು, ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:42
5 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.


ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿ ಮುಗಿಸಿಬಿಟ್ಟನಂತರ ಎಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಹತಿಸಿದರು.


ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯ ಮಾರ್ಗವಾಗಿ ಓಡತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು