Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:5 - ಕನ್ನಡ ಸತ್ಯವೇದವು J.V. (BSI)

5 ಆ ಊರಿನ ಜನರು ಅದೇ ರಾತ್ರಿ ನಾನು ಇಳುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯನ್ನು ಬಹಳವಾಗಿ ಭಂಗಪಡಿಸಿದರು. ಆಕೆಯು ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:5
10 ತಿಳಿವುಗಳ ಹೋಲಿಕೆ  

ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.


ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು - ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳುಕೊಂಡೆನು.


ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು