Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:8 - ಕನ್ನಡ ಸತ್ಯವೇದವು J.V. (BSI)

8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:8
8 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.


ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವದಿಲ್ಲವೆಂದು ಆಣೆಯಿಟ್ಟಿದ್ದರು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.


ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು.


ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು