ನ್ಯಾಯಸ್ಥಾಪಕರು 21:12 - ಕನ್ನಡ ಸತ್ಯವೇದವು J.V. (BSI)12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರು ಇದ್ದರು. ಪಟ್ಟಣವನ್ನು ನಾಶಪಡಿಸುವುದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು. ಅಧ್ಯಾಯವನ್ನು ನೋಡಿ |