Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:13 - ಕನ್ನಡ ಸತ್ಯವೇದವು J.V. (BSI)

13 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:13
9 ತಿಳಿವುಗಳ ಹೋಲಿಕೆ  

ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - ಈ ಮನೆಗೆ ಶುಭವಾಗಲಿ ಎಂದು ಮೊದಲು ಹೇಳಿರಿ.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;


ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲುತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋವಿುನವರೆಗೆ ಹಿಂದಟ್ಟಿ ತಿರಿಗಿ ಎರಡು ಸಾವಿರ ಜನರನ್ನು ಹತಮಾಡಿದರು.


ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.


ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು