Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:14 - ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:14
7 ತಿಳಿವುಗಳ ಹೋಲಿಕೆ  

ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.


ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.


ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.


ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು