Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:18 - ಕನ್ನಡ ಸತ್ಯವೇದವು J.V. (BSI)

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದೇವಾದದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವದಕ್ಕಾಗುವದಿಲ್ಲ ಎಂದು ಮಾತಾಡಿಕೊಳ್ಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಯೇಲರು ಶಾಪಗ್ರಸ್ತರಾಗಲಿ! ಎಂದು ಆಣೆಯಿಟ್ಟುಕೊಂಡಿದ್ದೇವೆ. ಇದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:18
4 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವದಿಲ್ಲವೆಂದು ಆಣೆಯಿಟ್ಟಿದ್ದರು.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು