ನ್ಯಾಯಸ್ಥಾಪಕರು 21:5 - ಕನ್ನಡ ಸತ್ಯವೇದವು J.V. (BSI)5 ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು. ಅಧ್ಯಾಯವನ್ನು ನೋಡಿ |